April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಬಗ್ಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಹಲವಾರು ವರ್ಷಗಳಿಂದ ಕಲ್ಪಿಸಲಾಗಿದೆ. ಆದರೇ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ, ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಪ್ರಸ್ತುತ ವರ್ಷಕ್ಕೆ ಕಲ್ಪಿಸಲು ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈಗಾಗಲೇ ಕ್ರಮ ವಹಿಸಬೇಕಾಗಿತ್ತು. ಈಗಾಗಲೇ ಜೂನ್ ತಿಂಗಳ ಅಂತ್ಯ ಸಮೀಪಿಸುತ್ತಿದ್ದು, ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ಪ್ರಾರಂಭವಾಗಿರುವುದಿಲ್ಲ. ಅಲ್ಲದೇ ಕಳೆದ ವರ್ಷ ಟೆಂಡ‌ರ್ ಪ್ರಕ್ರಿಯೆ ವಿಳಂಭವಾದ್ದರಿಂದ ಬೆಳೆ ವಿಮೆ ಅವಧಿಯನ್ನು 2023 ರ ಆಗಸ್ಟ್ 1 ರಿಂದ 2024 ರ ಜುಲೈ 31 ರ ವರೆಗೆ ನಿಗದಿಪಡಿಸಲಾಗಿದೆ. ಈ ಹಿಂದೆ ಒಮ್ಮೆ ಬೆಳೆ ವಿಮೆ ಪಡೆದರೆ ಅದು 3 ವರ್ಷದ ಅವಧಿಗೆ ಚಾಲ್ತಿಯಲ್ಲಿರುತ್ತಿತ್ತು ಆದರೆ ಕಳೆದ ವರ್ಷದಿಂದ ಕೇವಲ 1 ವರ್ಷದ ಅವಧಿಗೆ ಮಾತ್ರ ಮಿತಿಗೊಳಿಸಲಾಗಿದೆ. ಸಂಕಷ್ಟದಲ್ಲಿರುವ ಬೆಳೆಗಾರರಿಗೆ ನೆರವಾಗುವ ದೃಷ್ಟಿಯಿಂದ ಈ ಹಿಂದೆ ಇದ್ದಂತೆ ಬೆಳೆ ವಿಮೆ ಅವಧಿಯನ್ನು 3 ವರ್ಷಗಳಿಗೆ ವಿಸ್ತರಿಸಬೇಕು ಹಾಗೂ ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಅವರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈ ಕೂಡಲೇ ಕ್ರಮ ವಹಿಸಬೇಕು ಎಂದರು.

Related posts

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya
error: Content is protected !!