ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ , ಸ್ನೇಹ ಕ್ಲಿನಿಕ್ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇವುಗಳ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಇತ್ತೀಚೆಗೆ ಸರಕಾರಿ ಪ್ರೌಢಶಾಲೆ ಕಾಶಿಪಟ್ಣದಲ್ಲಿ ಜರುಗಿತು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್ ವಿದ್ಯಾರ್ಥಿಗಳಿಗೆ ಡೆಂಗ್ಯೂ ಮತ್ತು ಮಲೇರಿಯಾ ರೋಗ ಬಾರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸೇವಿಸಬೇಕಾದ ಆಹಾರಗಳ ಬಗ್ಗೆ ಸವಿವರ ಮಾಹಿತಿ ನೀಡಿದರು. ಸ್ನೇಹ ಕ್ಲಿನಿಕ್ ನ ಆಪ್ತ ಸಮಾಲೋಚಕಿ ಶ್ರೀಮತಿ ರಮ್ಯಾ ಹದಿಹರೆಯದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಗಮನ ಸೆಳೆಯುತ್ತಾ ಆಪ್ತ ಸಮಾಲೋಚನೆ ನಡೆಸಿದರು.
ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ ಅವರು ಸ್ವಾಗತಿಸಿದರು. ಶ್ರೀಮತಿ ಸೌಮ್ಯ ನಿರೂಪಿಸಿ ಶ್ರೀಮತಿ ಹರಿಣಾಕ್ಷಿ ಧನ್ಯವಾದವಿತ್ತರು. ಶಿಕ್ಷಕರಾದ ದೇವುದಾಸ್ ನಾಯಕ್, ಶ್ರೀಮತಿ ಸರಿನ್ ತಾಜ್ ಶ್ರೀಮತಿ ಸುಜಾತ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.