ವೇಣೂರು : ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್-ವೇಣೂರು ಪೋಲಿಸ್ ಠಾಣೆಯ ವತಿಯಿಂದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿ ಜೂ. 26 ರಂದು ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ಪರಿಣಾಮದ ಕುರಿತು ಜನಜಾಗೃತಿ ಅಭಿಯಾನವನ್ನು ಆಯೋಜಿಸಲಾಯಿತು.
ವೇಣೂರು ಪೋಲಿಸ್ ಠಾಣೆಯ ಎಎಸ್ಐ ಲೋಕೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗಿಯಾಗಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾನ್ಸ್ಟೇಬಲ್ ತ್ರಿಮೂರ್ತಿ, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್, ದೈಹಿಕ ಶಿಕ್ಷಣ ಶಿಕ್ಷಕ ಸುನಿಲ್ ಬಾಪಟ್, ಶಿಕ್ಷಕಿ ಸರೋಜರವರು ಉಪಸ್ಥಿತರಿದ್ದರು.