23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಲಾಯಿಲ ಮಕ್ಕಳಿಗೆ ಜೂ.26ರಂದು ಉಚಿತ ಬರೆಯುವ ಪುಸ್ತಕ ವಿತರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಉಚಿತವಾಗಿ ಪುಸ್ತಕ ನೀಡಿದ ದಾನಿಗಳಾದ ಉದ್ಯಮಿ ಲಾಯಿಲ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸದಾನಂದ ಶೆಟ್ಟಿ ಹಾಗೂ ಗುತ್ತಿಗೆದಾರರಾದ ಜಗನ್ನಾಥ ಶೆಟ್ಟಿ ಕರ್ನೋಡಿ ಭಾಗವಹಿಸಿ ಮಕ್ಕಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.
ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ ನಮ್ಮ ಶಾಲೆಯ ಮಕ್ಕಳೂ ಖಾಸಗಿ ಶಾಲೆಯ ಮಕ್ಕಳಂತೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ಕಲ್ಪನೆಯಲ್ಲಿ ಕಳೆದ ಎರಡು ವರ್ಷಗಳಿಂದ ಉತ್ತಮ ಗುಣಮಟ್ಟದ ಬರೆಯುವ ಪುಸ್ತಕಗಳನ್ನು ದಾನಿಗಳ ಮೂಲಕ ನೀಡಲಾಗುತ್ತಿದೆ. ಇದಕ್ಕೆ ಸ್ಪಂದಿಸಿದ ಸದಾನಂದ ಶೆಟ್ಟಿ ಹಾಗೂ ಜಗನ್ನಾಥ ಶೆಟ್ಟಿಯವರಿಗೆ ಕೃತಜ್ಞತೆಗಳು. ಅದೇ ರೀತಿ ಪುಸ್ತಕ ಪಡೆದ ಮಕ್ಕಳು ಮುಂದೆ ಒಳ್ಳೆಯ ವಿದ್ಯಾಭ್ಯಾಸ ಪಡೆದು ಶಾಲೆ ಹಾಗೂ ಊರಿಗೆ ಉತ್ತಮ ಹೆಸರನ್ನು ತಂದುಕೊಡುವುದಲ್ಲದೇ ಉದ್ಯೋಗ ಸಿಕ್ಕಿದ ನಂತರ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯ ಹಸ್ತ ಚಾಚಬೇಕು ಈ ಮೂಲಕ ಪುಸ್ತಕ ನೀಡಿದ ದಾನಿಗಳಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.


ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ ಉಪಾಧ್ಯಕ್ಷ ದಿವಾಕರ್ ಕುರುವ, ಸದಸ್ಯರುಗಳಾದ ಶೋಭಾ ಪಡ್ಲಾಡಿ, ಬೇಬಿ ಪಡ್ಲಾಡಿ, ಅಧ್ಯಾಪಕ ವೃಂದವರು ಉಪಸ್ಥಿತರಿದ್ದರು.
ಪ್ರಭಾರ ಮುಖ್ಯ ಶಿಕ್ಷಕರಾದ ಯೋಗೀಶ್ ಸ್ವಾಗತಿಸಿ ಸಹ ಶಿಕ್ಷಕ ಮಧು ಧನ್ಯವಾದವಿತ್ತರು.

Related posts

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya
error: Content is protected !!