April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಕ್ಕೂ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು, ಹಾಗು ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ಬಾಲಕರ – ಬಾಲಕಿಯರ ವಿಭಾಗದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಂಡಿದ್ದು, ಈ ಪಂದ್ಯಾವಳಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿರುವ ವಿದ್ವತ್ ಪಿಯು ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಡಾ| ಮಹಿತಾ ಕುಮಾರಿಯವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ನುಡಿಯನ್ನು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಯವರು ನುಡಿದರು. ಕಾರ್ಯಕ್ರಮವನ್ನು ವಾಣಿಜ್ಯ ಶಾಸ್ತ್ರದ ಉಪನ್ಯಾಸಕಿಯಾದ ಕುಮಾರಿ ಅನುಷಾ ಶೆಟ್ಟಿ ಯವರು ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಯವರು, ಕೋಶಾಧಿಕಾರಿಯಾದ ಎಂ.ಕೆ.ಕಾಶಿನಾಥ್ ಭಟ್ , ಹಿರಿಯ ಸಲಹೆಗಾರರಾದ ರಾಧಾಕೃಷ್ಣ ರೈ ಯವರು, ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡ , ಪ್ರಾಂಶುಪಾಲರಾದ ಡಾ| ಪ್ರಜ್ವಲ್ ಕಜೆ, ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.

Related posts

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya
error: Content is protected !!