September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ಮಾವಂತೂರು ಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ರಾಮಚಂದ್ರ ರವರು ಜೂ. 24 ರಂದು ಉಜಿರೆ ರೌಂಡ್ಸ್ ಕರ್ತವ್ಯದಲ್ಲಿ ನೇಮಿಸಿದಂತೆ ರೌಂಡ್ಸ್ ಕರ್ತವ್ಯದಲ್ಲಿದ್ದು, ಚಾರ್ಮಾಡಿ ರೋಡ್ ಕಡೆಯಿಂದ ಬೆಳ್ತಂಗಡಿ ಸಂಚಾರ ಠಾಣೆ ಕಡೆ ಬರುತ್ತಿರಲು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಉಜಿರೆ ಪೇಟೆಯ ಮಾವಂತೂರು ಲಾಡ್ಜ್ ಎದುರುಗಡೆ ಕೆಲವು ಜನರು ಸೇರಿ ರಸ್ತೆ ತಡೆನಡೆಸಿ ಅಂದರೆ ಸಾರ್ವಜನಿಕ ಡಾಮಾರು ರಸ್ತೆಯ ಮಧ್ಯೆಕೂತು ವಾಹನ ಸಂಚಾರ ಹಾಗೂ ಜನಸಂಚಾರಕ್ಕೆ ತಡೆ ಒಡ್ಡುತ್ತಿದ್ದ ಸಮಯ ಸ್ಥಳಕ್ಕೆ ಹೋಗಿ ನೋಡಲಾಗಿ ನೋಡಿ ಪರಿಚಯ ಇರುವ ಪ್ರವೀಣ್ ಫೆರ್ನಾಂಡಿಸ್, ರಮೇಶ ಗಾಂಧಿನಗರ, ಶೀನಗಾಂಧಿನಗರ, ಇಕ್ಷಾಲ್ ಅತ್ತಾಜೆ, ಸಂತೋಷ್ ಉಜಿರೆ, ಉಮೇಶ ಆಚಾರ್ಯ, ಅಣು ಗಾಂಧಿನಗರ, ಸುಜನ್ ಪಜಿರಡ್ಡ, ಬಾಬು ಗಾಂಧಿನಗರ, ಗಿರೀಶ ಪೆರ್ಲ, ಗೋಪಾಲ ಗಾಂಧಿನಗರ, ಗಣೇಶ ಬಡೆಕೊಟ್ಟು, ಉಮರ್ ಟಿ.ಬಿಕ್ರಾಸ್, ರಂಜನ್ ಗಾಂಧಿನಗರ ಮತ್ತು ಇತರರು ಸ್ಥಳದಲ್ಲಿ ಸೇರಿದ್ದು ವಿಚಾರಿಸಲಾಗಿ, ಮಾವಂತೂರುಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.

Related posts

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya
error: Content is protected !!