28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಂಬಾಕು ರಹಿತ ಜಾಗೃತಿಯನ್ನು ಮೂಡಿಸಿದರು. ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಚಿತ್ರಕಲೆ, ಪ್ರಬಂಧ, ಕವನವನ್ನು ರಚಿಸಿದರು.


ತಂಬಾಕು ರಹಿತ ಕಾರ್ಯಕ್ರಮದನ್ವಯ ಆರೋಗ್ಯ ಇಲಾಖೆಯಿಂದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್ ಮಾಹಿತಿಯನ್ನು ನೀಡಿದರು. ಅಲ್ಲದೆ ಸಿಸ್ಟರ್ ರಮ್ಯಾ ಹದಿಹರೆಯದ ಬಗ್ಗೆ ಮಕ್ಕಳಿಗೆ ತಿಳಿಯಪಡಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತ ಸೋಮಶೇಖರ್ ಶೆಟ್ಟಿ ಮಕ್ಕಳಿಗೆ ಸ್ಕೌಟ್ಸ್ ಚಳವಳಿಯ ಬಗ್ಗೆ ತಿಳಿಯಪಡಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಕ್ಲಬ್ ಬುಲ್ ಬುಲ್ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಸಂಘಟನೆ ಹಾಗೂ ನಿರೂಪಣೆ ಸ್ವಾಗತ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ , ಗೈಡರ್ ಶ್ರೀಮತಿ ಪ್ರಮೀಳಾ ನೆರವೇರಿಸಿದರು. ಸ್ಕೌಟ್ಸ್ ಮಾಸ್ಟರ್ ಮಂಜುನಾಥ್ ಧನ್ಯವಾದವಿತ್ತರು.

Related posts

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya
error: Content is protected !!