24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ, ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇದರ ಸಹಯೋಗದಲ್ಲಿ ಜೂ. 27 ರಂದು ಉಜಿರೆಯ ಶ್ರೀ ಶಾರದ ಮಂಟಪದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ವಿದ್ಯಾಸಂಸ್ಥೆಗಳು ಲಾಯಿಲ ಬೆಳ್ತಂಗಡಿ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದಲ್ಲಿ ಬೃಹತ್‌ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತೇಸರರು ಶರತ್‌ ಕೃಷ್ಣ ಪಡ್ಡೆಟ್ನಾಯ ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ಮಾಜಿ ಸಚಿವರು ಕೆ. ಗಂಗಾಧರ ಗೌಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಕಿವಿ, ಮೂಗು, ಗಂಟಲು ಶಸ್ತ್ರ ಚಿಕಿತ್ಸಾ ತಜ್ಞರು ಡಾ| ವಿಶ್ವ ವಿಜೇತ ಎಸ್.ಕೆ., ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್, ಉಜಿರೆ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ) ಅಧ್ಯಕ್ಷ ರಂಜನ್ ಜಿ. ಗೌಡ, ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಗೌಡ ಇಚ್ಚಿಲ, ಒಕ್ಕಲಿಗರ ಸೇವಾ ಸಂಘ ಜೊತೆ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ, ಒಕ್ಕಲಿಗರ ಸೇವಾ ಸಂಘ ಸದಸ್ಯೆ ಶ್ರೀಮತಿ ಸೌಮ್ಯಲತಾ ಜಯಂತ ಗೌಡ ಗುರಿಪಳ್ಳ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಯುವ ಸಂಘ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ತಾಲೂಕು ಒಕ್ಕಲಿಗ ಗೌಡರ ಮಹಿಳಾ ಸಂಘ ಅಧ್ಯಕ್ಷೆ ಶ್ರೀಮತಿ ಅಪರ್ಣಾ ಶಿವಕಾಂತ ಗೌಡ, ತಾಲೂಕು ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ ಅಧ್ಯಕ್ಷೆ ಶ್ರೀಮತಿ ಅನುಪಮಾ ಸತೀಶ್ ಗೌಡ, ಮಂಗಳೂರು ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮೆಡಿಕಲ್ ಆಫಿಸರ್ ಡಾ| ಸುನಿಧಿ ಉಪಸ್ಥಿತರಿದ್ದರು..

Related posts

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya
error: Content is protected !!