23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

ಅಳದಂಗಡಿ: ಸರಕಾರಿ ಪದವಿಪೂರ್ವ ಕಾಲೇಜು ಅಳದಂಗಡಿ ಸಂಸ್ಥೆಯ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಭವನದಲ್ಲಿ ಜೂ.25ರಂದು ನಡೆಯಿತು. ರೋಟರಿ ಕ್ಲಬ್ ಆಫ್ ಬೆಂಗಳೂರು ಮತ್ತು ಕೊಲೀನ್ಸ್ ಆ್ಯರೋಸ್ಪೇಸ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಸುಮಾರು 40 ಲಕ್ಷ ಅನುದಾನದಲ್ಲಿ ಕಾಮಗಾರಿ ನಡೆದಿರುತ್ತದೆ.


ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಇವರು ಉದ್ಘಾಟನಾ ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿ ಕೋಲೀನ್ಸ್ ಏರೋಸ್ಪೇಸ್ ಸಿಎಸ್ಆರ್ ನಿಧಿಯಿಂದ ನಿರ್ಮಾಣದವಾದಂತ ಈ ಪ್ರಾಜೆಕ್ಟ್ ಅಳದಂಗಡಿ ಕಾಲೇಜಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಶಾಸಕನಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಕಂಪೆನಿಯ ಸಿಎಸ್ಆರ್ ಲೀಡ್ ಅಮಿತ್ ಸಾವರ್ಕರ್ ಇವರು ವಿಜ್ಞಾನ ಕೊಠಡಿಯನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಕಲಿಕೆಯಲ್ಲಿ ಸಾಧನೆ ಮಾಡಿ ಸಮಾಜದಲ್ಲಿ ಉತ್ತಮ ಜವಾಬ್ದಾರಿಯುತ ವ್ಯಕ್ತಿಗಳಾಬೇಕು ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಕಂಪನಿಯ ಎಚ್ ಆರ್ ಸೀನಿಯರ್ ಮೆನೇಜರ್ ನವೀನ್ ಶೆಟ್ಟಿ , ರೋಟರಿ ಕ್ಲಬ್ ಆಫ್ ಬೆಂಗಳೂರಿನ ರೊಟೇರಿಯನ್ ಮಂಜುನಾಥ್ ಆನೇಕರ್, ರೊಟೇರಿಯನ್ ರಂಗರಾವ್ ರೊಟೇರಿಯನ್ ಛಲಮಣಿ ಕರ್ನಾಟಕ ಸರ್ಕಾರದ ಉಪ ಕಾರ್ಮಿಕ ಆಯುಕ್ತರಾದ ಗುರುಪ್ರಸಾದ್ ಎಚ್ ಎಲ್ , ಸಿ ಬಿ ಸಿ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲ ಬೈಲು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶಾಂತಿಮರಿಯ ಉಪಸ್ಥಿತರಿದ್ದರು ಸಂಸ್ಥೆಯ ಪ್ರಾಂಶುಪಾಲರಾದ ಸನ್ನಿ ಕೆಎಂ ರವರು ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ನುಡಿದರು.

ಈ ಸಂದರ್ಭದಲ್ಲಿ ಸಹಕರಿಸಿದ ಕೊಲೀನ್ ಏರೋಸ್ಪೇಸ್ ಮತ್ತು ರೋಟರಿ ಕ್ಲಬ್ ಅಫ್ ಬೆಂಗಳೂರು ಇದರ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು ಜೀವಶಾಸ್ತ್ರ ಉಪನ್ಯಾಸಕರಾದ ಶ್ರೀ ಪ್ರಶಾಂತ್ ಕುಮಾರ್ ಅವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.

Related posts

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya
error: Content is protected !!