25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಬೆಳ್ತಂಗಡಿ: ಇತಿಹಾಸದ ಮಹಾಪುರುಷರನ್ನು ನೆನಪಿಸಿಕೊಂಡು ಅವರ ಆದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಧ್ಯೇಯವಾಗಿರಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬೆಳಿಯಪ್ಪ .ಕೆ ಹೇಳಿದರು.


ಅವರು ವಾಣಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ನಾಡಪ್ರಭು ಕೆಂಪೇಗೌಡರ ಜನ್ಮ ದಿನಾಚರಣೆಯ ಕುರಿತು ಮಾತನಾಡುತ್ತ, ಜಗತ್ತಿನ ಎಲ್ಲಾ ಪ್ರದೇಶದ ಜನರನ್ನು ವಿವಿಧ ರೀತಿಯಲ್ಲಿ ಆಕರ್ಷಿಸುವ ಬೆಂಗಳೂರು ಇಂದು ವಾಣಿಜ್ಯ ನಗರಿ ಮಾತ್ರವಲ್ಲದೆ ಶೈಕ್ಷಣಿಕ, ಔದ್ಯೋಗಿಕ, ತಾಂತ್ರಿಕ ಕ್ಷೇತ್ರದಲ್ಲಿ ಮುನ್ನಡೆಯನ್ನು ಹೊಂದಿದೆ. ಪ್ರಾಕೃತಿಕವಾಗಿ ಉತ್ತಮ ಅಂಶಗಳನ್ನು ಹೊಂದಿದ್ದು ,ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಬೆಳೆಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ಅವರ ದೂರಾಲೋಚನೆ ಯುವ ಜನರಿಗೆ ಮಾದರಿಯಾಗಿದೆ ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ .ಕೆ.ಎನ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ವಂದಿಸಿದರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ