ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಜೂ 21 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಪರಿಸರ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾರತಿ ಎಸ್ ಶೆಟ್ಟಿ ಉದ್ಘಾಟಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ವಲಯದ ಮೇಲ್ವಿಚಾರಕ ಯಶೋಧರವರು ಮಕ್ಕಳಲ್ಲಿ ಪರಿಸರ ಸ್ವಚ್ಛತೆ, ಮಹತ್ವ, ರಕ್ಷಣೆಯ ಬಗ್ಗೆ ಮಾಹಿತಿ ನೀಡಿ ಪರಿಸರ ಜಾಗೃತಿಯನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಶಾಲಿನಿ ಪಯ್ಯೊಟ್ಟು, ಆಮಿನ ಮದ್ದಡ್ಕ , ಸೇವಾ ನಿರತರಾದ ಆನಂದ ಪೂಜಾರಿ, ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಜಾಗೂ ಸದಸ್ಯರು, ಆಶಾ ಕಾರ್ಯಕರ್ತೆ ಜಯಂತಿ, ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಟ್ರಸ್ಟ್ ವತಿಯಿಂದ ನಡೆಸಲಾದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು ಬಳಿಕ ಟ್ರಸ್ಟ್ ನಿಂದ ನೀಡಲಾದ ಹಲವು ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು. ಮುಖ್ಯ ಶಿಕ್ಷಕರಾದ ಭಾಸ್ಕರ ಸ್ವಾಗತಿಸಿ. ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.