ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

Suddi Udaya

ಕೊಯ್ಯೂರು : “ಸ್ವಾಸ್ತ್ಯ ಸಮಾಜದ ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಮಾದಕ ದ್ರವ್ಯ ಮತ್ತು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಕೈ ಜೋಡಿಸಬೇಕೆಂದು ಬೆಳ್ತಂಗಡಿ ಆರಕ್ಷಕ ವೃತ್ತ ನಿರೀಕ್ಷಕ ವಸಂತ ಆಚಾರ್ ವಿದ್ಯಾರ್ಥಿಗಳಿಗೆ ಕರೆನೀಡಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜರುಗಿದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ ಬಾಲಕಿಯರು ಸಮಾಜದಲ್ಲಿ ನಡೆಯುವ ಅನಿಷ್ಠಗಳಿಗೆ ಬಲಿಯಾಗಬಾರದೆಂದು ಕಾಳಜಿಯನ್ನು ವ್ಯಕ್ತಪಡಿಸಿದರು.


ಬೆಳ್ತಂಗಡಿ ಆರಕ್ಷಕ ಠಾಣೆಯ ಉಪನೀರಿಕ್ಷಕರಾದ ಮುರಳೀಧರ ನಾಯಕ್ ಮಾತನಾಡಿ ಮಾದಕ ದ್ರವ್ಯ ಮತ್ತು ಅಕ್ರಮ ಸಾಗಾಟದಲ್ಲಿ ಯುವಜನರನ್ನು ತೊಡಗಿಸಿಕೊಳ್ಳುವ ಹುನ್ನಾರ ನಡೆಯುತ್ತಿದ್ದು ವಿದ್ಯಾರ್ಥಿಗಳು ಜಾಗರೂಕತೆಯಿಂದ ಮುನ್ನಡೆಯಬೇಕು ಹಾಗೂ ನಮ್ಮ ಸಮಾಜ ಈ ವಿಷ ವರ್ತುಲದಲ್ಲಿ ಸಿಲುಕದಂತೆ ಜಾಗೃತಿ ವಹಿಸಬೇಕೆಂದು ಕರೆ ನೀಡಿದರು. ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಪ್ರಮಾಣವಚನಗೈದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯರಾದ ಮೋಹನ ಗೌಡ ಪ್ರಾಸ್ತವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಕುಮಾರಿ ತೃಪ್ತಿ ಧನ್ಯವಾದವಿತ್ತರು.

Leave a Comment

error: Content is protected !!