April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ


ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಹಾಲಿನ ದರ ಏರಿಕೆ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಹೆಚ್ಚಳ ಮಾಡಲು ಜು. 02 ರಂದು ಜಿಲ್ಲಾಮಟ್ಟದ ಬೃಹತ್ ಪ್ರತಿಭಟನೆ ಬೆಳ್ತಂಗಡಿ ಮಿನಿ ವಿಧಾನ ಸೌಧದ ಬಳಿ ನಡೆಯಲಿದೆ.

ಬೆಳ್ತಂಗಡಿ ರೈತ ಮೋರ್ಚಾ ಅಧ್ಯಕ್ಷ ವಿಜಯ ಗೌಡ ರವರ ನೇತೃತ್ವದಲ್ಲಿ ಹಾಲಿನ ದರ ಹೆಚ್ಚಳ ಖಂಡಿಸಿ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಏರಿಕೆ ಯಾಗುವ ಬಗ್ಗೆ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ಜೂ.29 ರಂದು ಪಕ್ಷದ ಕಚೇರಿಯಲ್ಲಿ ವಿಶೇಷ ಬೈಠಕ್ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರು ಗಣೇಶ್ ಗೌಡ ನಾವೂರು ಮಾರ್ಗದರ್ಶನ ನೀಡಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಹಾಗೂ ಬೆಳ್ತಂಗಡಿ ಮಂಡಲ ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು , ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಗೌಡ ಆಳಂಬಿಲ ಕೊಕ್ಕಡ, ದಿವಿನೇಶ್ ಚಾರ್ಮಾಡಿ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದರು.

Related posts

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya
error: Content is protected !!