ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಅಮೃತವರ್ಷಿಣಿ ಸಭಾಂಗಣದಲ್ಲಿ ಜರಗಿತು.
ಮುಖ್ಯ ಅತಿಥಿಯಾಗಿ ಎಸ್ ಡಿ ಯಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಧನ್ಯ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಇವರು ಪಠ್ಯದ ಜೊತೆಗೆ ಪೂರಕವಾದ ಇತರ ಚಟುವಟಿಕೆಗಳಿಗೂ ಹೆಚ್ಚಿನ ಗಮನ ಕೊಡಬೇಕು. ಇದು ಊಟದ ಜೊತೆ ಉಪ್ಪಿನಕಾಯಿ ಇದ್ದoತೆ. ವಿದ್ಯಾರ್ಥಿಗಳು ಸಿಕ್ಕಿದ್ದನ್ನು ಹೆಕ್ಕಿ ತಿನ್ನುವ ಪಕ್ಷಿಗಳಾಬೇಕು. ಓದುವ ಹವ್ಯಾಸವನ್ನು ಹೆಚ್ಚು ಬೆಳೆಸಿಕೊಂಡು ಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದರು.
ಶಾಲಾ ಮುಖ್ಯ ಶಿಕ್ಷಕ ಕಮಲ್ ತೇಜು ರಜಪೂತ ಕಾರ್ಯಕ್ರಮಕ್ಕೆ ಶುಭ ಕೋರಿದರು. ಯಕ್ಷಗಾನ ತರಬೇತಿದಾರ ಲಕ್ಷ್ಮಣ ಗೌಡ ಬೆಳಾಲು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕ ಶೇಖರ್ ಗೌಡ ಸ್ವಾಗತಿಸಿ, ಶಿಕ್ಷಕಿ ಸೀಮಾ ವಂದಿಸಿದರು. ಶಿಕ್ಷಕಿ ಶ್ರೀಜಾ ನಿರೂಪಿಸಿದರು. ಎಲ್ಲಾ ಶಿಕ್ಷಕರು ಸಹಕರಿಸಿದರು.