24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

ನಿಡ್ಲೆ: ಇಲ್ಲಿಯ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭವು ಜೂ.29 ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ಯಾಮಲ ವಹಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ , ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ರಮೇಶ್ ರಾವ್ ಕೊಡಂಗೆ, ನಿಡ್ಲೆ ಗ್ರಾ.ಪಂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್, ಗಣೇಶ್ ಹೆಬ್ಬಾರ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ, ಗ್ರಾ.ಪಂ. ಸದಸ್ಯರಾದ ಶೈಲಜಾ, ಹೇಮಾವತಿ, ಗಣೇಶ್ ಸ್ಟೋರ್‍ಸ್ ಮಾಲಕ ಪುರಂದರ ಗೌಡ, ನಿಸರ್ಗ ಯುವಜನೇತರ ಯುವಕ ಸಂಘದ ಅಧ್ಯಕ್ಷ ಪುನೀತ್ ಕುಮಾರ್, ಜ್ಯೋತಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಂಜನ್ ಅಠವಳೆ, ಸಂಪನ್ಮೂಲ ವ್ಯಕ್ತಿ ಪ್ರತಿಭಾ, ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ರಾವ್, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಮಾಧವ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ ಸದಸ್ಯರು, ಅಧ್ಯಾಪಕರು, ಅಕ್ಷರದಾಸೋಹದ ಸಿಬ್ಬಂದಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಪ್ರಸ್ತಾವಿಕ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕ ಗೋಪಾಲ್ ಸ್ವಾಗತಿಸಿದರು, ಶಿಕ್ಷಕ ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya
error: Content is protected !!