April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

ಬೆಳ್ತಂಗಡಿ: ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದ ಘಟನೆ ಇಂದು ಜೂ.29 ಮಧ್ಯಾಹ್ನ ನಡೆದಿದೆ.

ಗೂಡ್ಸ್ ಹೊತ್ತ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ಸನ್ನು ಗೂಡ್ಸ್ ಹೊತ್ತ ಟೆಂಪೋ ಓವರ್ ಟೇಕ್ ಮಾಡುವ ಭರದಲ್ಲಿ ದುರ್ಘಟನೆ ಸಂಭವಿಸಿತು. ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ರಾಜಹಂಸ ಬಸ್ ಬರುತ್ತಿದ್ದು, ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ರಾಜಹಂಸಕ್ಕೆ ಡಿಕ್ಕಿ‌ ಹೊಡೆದು, ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ.

ಇನ್ನೊಂದೆಡೆ ರಾಜಹಂಸ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾದವು.

ಸ್ಥಳದಲ್ಲಿ ಟ್ರಾಫಿಕ್ ದಟ್ಟಣೆಯಾಗಿದ್ದು, ಎರಡು ಕಡೆಯೂ ವಾಹನಗಳು ಸಾಲುಗಟ್ಟಿ ನಿಂತಿವೆ. ಸಂಚಾರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya
error: Content is protected !!