24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

ಕಣಿಯೂರು: ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆ ಮಾಡುವ ಸಲುವಾಗಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ 36 ವರ್ಷದ ಮಹಿಳೆಯನ್ನು ಸಾಕು ನಾಯಿ ಕಾಪಾಡಿದ ಘಟನೆ ಜೂ.27 ರಂದು ರಾತ್ರಿ ನಡೆದಿದೆ.

ಬೆಂಗಳೂರು ಮೂಲದ ಈ ಮಹಿಳೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಕಣಿಯೂರು ಗ್ರಾಮದ ಪಿಲಿಗೂಡಿನ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಪತಿಗೆ ದೊರಕಿದ ಪಿತ್ರಾರ್ಜಿತ ಆಸ್ತಿಯಲ್ಲಿ ವರ್ಷದ ಹಿಂದೆ ಮನೆ ಕಟ್ಟಿಕೊಂಡು ಇಬ್ಬರು ಮಕ್ಕಳೊಂದಿಗೆ ಸ್ವಾಭಿಮಾನದ ಜೀವನ ನಡೆಸುತ್ತಿದ್ದರು. ಅದುವರೆಗೆ 15 ವರ್ಷ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕೆಲವು ದಿನಗಳಿಂದ ಮೆಕಾನಿಕ್ ವೃತ್ತಿಯ ಪತಿ ಮತ್ತು ಪತ್ನಿ ನಡುವೆ ಮನಸ್ತಾಪ ಮೂಡಿತ್ತು. ಜೂ.27ರಂದು ನೊಂದುಕೊಂಡ ಮಹಿಳೆ ಜೀವ ತ್ಯಜಿಸುವ ನಿರ್ಧಾರ ಮಾಡಿ ನೇತ್ರಾವತಿ ಸೇತುವೆಗೆ ತೆರಳಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕುನಾಯಿ ಅಪಾಯವನ್ನು ಅರಿತು ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು, ಬೊಗಳುತ್ತಾ ರಸ್ತೆಯಲ್ಲಿ ಹೋಗುತ್ತಿರುವವರ ಗಮನ ಸೆಳೆಯುವ ಪ್ರಯತ್ನ ನಡೆಸುತ್ತಿತ್ತು. ಇದೇ ವೇಳೆ ಬೈಕ್‌ನಲ್ಲಿ ಬಂದ ವ್ಯಕ್ತಿಯೋರ್ವರು ಇದನ್ನು ಕಂಡು ಪರಿಚಯದ ಸಮಾಜ ಸೇವಕರೋರ್ವರ ಮೂಲಕ ಇನ್ನೇನು ನದಿಗೆ ಹಾರುವಂತಿದ್ದ ಮಹಿಳೆಯನ್ನು ರಕ್ಷಿಸಿದ ಘಟನೆ ಜೂ.27 ರಂದು ರಾತ್ರಿ ಸಂಭವಿಸಿದೆ. ಒಟ್ಟಾರೆ ಮೂಕಪ್ರಾಣಿಯಾದ ನಾಯಿಯ ತುಡಿತ ಮತ್ತು ಪ್ರಯತ್ನ ಮಹಿಳೆಯನ್ನು ರಕ್ಷಿಸಲು ನೆರವಾದಂತಾಗಿದೆ.

ಮನೆಗೆ ಹೋಗಲಾರೆ ಎಂದು ಪಟ್ಟು: ಜೂ.28 ರಂದು ದಿನವಿಡೀ ರಾಜೀ ಮಾತುಕತೆ ನಡೆಯಿತಾದರೂ ಮಹಿಳೆ ಗಂಡನ ಮನೆಗೆ ಹೋಗಲು ನಿರಾಕರಿಸಿದರು. ಪೊಲೀಸರು ಮತ್ತು ಸ್ಥಳೀಯ ಮನವೊಲಿಕೆಗೆ ಸಾಕಷ್ಟು ಪ್ರಯತ್ನಿಸಿದರೂ ಯಶಸ್ಸು ಸಿಗಲಿಲ್ಲ. ಪ್ರಸ್ತುತ ಅವರು ಟೈಲರಿಂಗ್ ಕಲಿಯುತ್ತಿದ್ದ ಗೆಳತಿಯ ಮನೆಯಲ್ಲಿದ್ದು, ಶನಿವಾರ ಬೆಂಗಳೂರಿನ ತಾಯಿ ಮನೆಯಿಂದ ಕರೆದೊಯ್ಯಲು ಬರುವುದಾಗಿ ತಿಳಿದುಬಂದಿದೆ. ಇಬ್ಬರು ಮಕ್ಕಳು ಅಪ್ಪನೊಂದಿಗೆ ಇರುವುದಾಗಿ ತಿಳಿಸಿರುವರು.

Related posts

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!