September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

ಕಣಿಯೂರು: ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆ ಮಾಡುವ ಸಲುವಾಗಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ 36 ವರ್ಷದ ಮಹಿಳೆಯನ್ನು ಸಾಕು ನಾಯಿ ಕಾಪಾಡಿದ ಘಟನೆ ಜೂ.27 ರಂದು ರಾತ್ರಿ ನಡೆದಿದೆ.

ಬೆಂಗಳೂರು ಮೂಲದ ಈ ಮಹಿಳೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಕಣಿಯೂರು ಗ್ರಾಮದ ಪಿಲಿಗೂಡಿನ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಪತಿಗೆ ದೊರಕಿದ ಪಿತ್ರಾರ್ಜಿತ ಆಸ್ತಿಯಲ್ಲಿ ವರ್ಷದ ಹಿಂದೆ ಮನೆ ಕಟ್ಟಿಕೊಂಡು ಇಬ್ಬರು ಮಕ್ಕಳೊಂದಿಗೆ ಸ್ವಾಭಿಮಾನದ ಜೀವನ ನಡೆಸುತ್ತಿದ್ದರು. ಅದುವರೆಗೆ 15 ವರ್ಷ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕೆಲವು ದಿನಗಳಿಂದ ಮೆಕಾನಿಕ್ ವೃತ್ತಿಯ ಪತಿ ಮತ್ತು ಪತ್ನಿ ನಡುವೆ ಮನಸ್ತಾಪ ಮೂಡಿತ್ತು. ಜೂ.27ರಂದು ನೊಂದುಕೊಂಡ ಮಹಿಳೆ ಜೀವ ತ್ಯಜಿಸುವ ನಿರ್ಧಾರ ಮಾಡಿ ನೇತ್ರಾವತಿ ಸೇತುವೆಗೆ ತೆರಳಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕುನಾಯಿ ಅಪಾಯವನ್ನು ಅರಿತು ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು, ಬೊಗಳುತ್ತಾ ರಸ್ತೆಯಲ್ಲಿ ಹೋಗುತ್ತಿರುವವರ ಗಮನ ಸೆಳೆಯುವ ಪ್ರಯತ್ನ ನಡೆಸುತ್ತಿತ್ತು. ಇದೇ ವೇಳೆ ಬೈಕ್‌ನಲ್ಲಿ ಬಂದ ವ್ಯಕ್ತಿಯೋರ್ವರು ಇದನ್ನು ಕಂಡು ಪರಿಚಯದ ಸಮಾಜ ಸೇವಕರೋರ್ವರ ಮೂಲಕ ಇನ್ನೇನು ನದಿಗೆ ಹಾರುವಂತಿದ್ದ ಮಹಿಳೆಯನ್ನು ರಕ್ಷಿಸಿದ ಘಟನೆ ಜೂ.27 ರಂದು ರಾತ್ರಿ ಸಂಭವಿಸಿದೆ. ಒಟ್ಟಾರೆ ಮೂಕಪ್ರಾಣಿಯಾದ ನಾಯಿಯ ತುಡಿತ ಮತ್ತು ಪ್ರಯತ್ನ ಮಹಿಳೆಯನ್ನು ರಕ್ಷಿಸಲು ನೆರವಾದಂತಾಗಿದೆ.

ಮನೆಗೆ ಹೋಗಲಾರೆ ಎಂದು ಪಟ್ಟು: ಜೂ.28 ರಂದು ದಿನವಿಡೀ ರಾಜೀ ಮಾತುಕತೆ ನಡೆಯಿತಾದರೂ ಮಹಿಳೆ ಗಂಡನ ಮನೆಗೆ ಹೋಗಲು ನಿರಾಕರಿಸಿದರು. ಪೊಲೀಸರು ಮತ್ತು ಸ್ಥಳೀಯ ಮನವೊಲಿಕೆಗೆ ಸಾಕಷ್ಟು ಪ್ರಯತ್ನಿಸಿದರೂ ಯಶಸ್ಸು ಸಿಗಲಿಲ್ಲ. ಪ್ರಸ್ತುತ ಅವರು ಟೈಲರಿಂಗ್ ಕಲಿಯುತ್ತಿದ್ದ ಗೆಳತಿಯ ಮನೆಯಲ್ಲಿದ್ದು, ಶನಿವಾರ ಬೆಂಗಳೂರಿನ ತಾಯಿ ಮನೆಯಿಂದ ಕರೆದೊಯ್ಯಲು ಬರುವುದಾಗಿ ತಿಳಿದುಬಂದಿದೆ. ಇಬ್ಬರು ಮಕ್ಕಳು ಅಪ್ಪನೊಂದಿಗೆ ಇರುವುದಾಗಿ ತಿಳಿಸಿರುವರು.

Related posts

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸವಣಾಲು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya
error: Content is protected !!