24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

ನಾರಾವಿ: ರಸ್ತೆಯಲ್ಲಿ ನಾಯಿಯೊಂದು ಬೈಕ್‌ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವಿಗೀಡಾದ ಘಟನೆ ಹೊಸ್ಮಾರು ಬಳಿ ಜೂ.28 ರಂದು ಸಂಭವಿಸಿದೆ.

ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26ವ) ಎಂಬವರೇ ಮೃತಪಟ್ಟ ಮಹಿಳೆ. ಕಾರ್ಕಳ-ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ಜೂ.28ರ ಸಂಜೆ ಗಂಡನೊಂದಿಗೆ ಬೈಕ್‌ನಲ್ಲಿ ಸಾಗುತ್ತಿದ್ದಾಗ ನಾಯಿ ದಿಢೀರನೆ ಅಡ್ಡ ಬಂದ ಪರಿಣಾಮ ಬೈಕ್ ರಸ್ತೆಗೆಸೆಯಲ್ಪಟ್ಟಿತ್ತು.

ಘಟನೆಯಿಂದ ನೀಕ್ಷಾ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಸ್ವರೂಪದ ಗಾಯವಾಗಿದ್ದು, ಆಸ್ಪತ್ರೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು. ನೀಕ್ಷಾ ಅವರಿಗೆ ಎರಡು ತಿಂಗಳ ಹಿಂದೆಯಷ್ಟೇ ಮದುವೆ ಆಗಿತ್ತು ಎಂದು ತಿಳಿದು ಬಂದಿದೆ.

Related posts

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!