20.5 C
ಪುತ್ತೂರು, ಬೆಳ್ತಂಗಡಿ
November 25, 2024
ಆರೋಗ್ಯಶಾಲಾ ಕಾಲೇಜು

ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಂಭವನೀಯ ಪ್ರಾಕೃತಿಕ
ವಿಕೋಪದ ಬಗ್ಗೆ ವಿಶೇಷ ಟಾಸ್ಕ್ ಫೋರ್ಸ್ ಸಭೆಯು ಅಧ್ಯಕ್ಷರಾದ ದಿವಾಕರ ಎಂ ರವರ ಅಧ್ಯಕ್ಷತೆಯಲ್ಲಿ ಜೂ. 29ರಂದು ಜರಗಿತು.

ಪ್ರಕೃತಿ ವಿಕೋಪದ ಬಗ್ಗೆ ಸಮೀಕ್ಷೆ ನಡೆಸಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ,ಡೆಂಗ್ಯೂ ಜ್ವರದ ಬಗ್ಗೆ ವಿಶೇಷ ಕಾಳಜಿ ವಹಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮ ವಹಿಸುವುದು,ವಿದ್ಯುತ್ ಸಂಪರ್ಕದ ಲೈನ್ ಗಳಿಗೆ ತಾಗಿಕೊಂಡಿರುವ ಮರಗಳನ್ನು ತೆರವು ಮಾಡಲು ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ, ಪಂಚಾಯತ್ ಜಂಟಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ವಹಿಸುವುದು. ಅಪಾಯದಂಚಿನಲ್ಲಿರುವ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸಂಬಂಧಿಸಿದ ಇಲಾಖೆಗೆ ತುರ್ತು ವರದಿ ನೀಡಿ
ಕ್ರಮವಹಿಸುವುದು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಮಾಹಿತಿ ನೀಡಿದರು.
ಸದಸ್ಯರಾದ ಅಬ್ದುಲ್ ಕರೀಮ್,ಶ್ರೀಮತಿ ಸುಭಾಷಿಣಿ ಕೆ, ಶ್ರೀಮತಿ ಮೋಹಿನಿ,ವಿಜಯ ಗೌಡ, ಲತೀಫ್ ಪರಿಮ, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ದನ್ಯವಾದವಿತ್ತರು.
ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಯ ಮುಖ್ಯಸ್ಥರು,ಆರೋಗ್ಯ ಇಲಾಖೆಯ ಸಿಬ್ಬಂದಿ,ಅಂಗನವಾಡಿ ಕಾರ್ಯಕರ್ತೆ,ಗ್ರಾಮ ಬೀಟ್ ಪೋಲಿಸ್ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

Related posts

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya
error: Content is protected !!