30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ. ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ ನಡೆಯಿತು.

ರಾ. ಸೇ. ಯೋಜನೆಯ ಸಲಹಾ ಸಮಿತಿಯ ಸದಸ್ಯ ಹಾಗೂ ಹಿರಿಯ ವಿದ್ಯಾರ್ಥಿ ಸ್ವಯಂ ಸೇವಕ ಧನುಷ್ ಕೆ.ಪಿ ಅವರು ರಾ.ಸೇ.ಯೋಜನೆಯ ಕಾರ್ಯಗಳ ಮಾಹಿತಿಗಳ ಬಗ್ಗೆ ತರಬೇತಿ ನಡೆಸಿದರು. ಇವರೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾ.ಸೇ. ಯೋಜನೆಯ ಸ್ವಯಂ ಸೇವಕರಾದ ನಿಸರ್ಗ , ನಿಕ್ಷೇಪ್ ಹಾಗೂ ತ್ರಿಶೂಲ್ ಅವರು ವಿವಿಧ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಸಿದರು.

ಘಟಕದ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು. ಘಟಕದ ನಾಯಕ ಆದಿತ್ಯ ಹಾಗೂ ನಾಯಕಿ ಪ್ರಾಪ್ತಿ ನೇತೃತ್ವ ವಹಿಸಿದ್ದರು.

Related posts

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!