April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಧರ್ಮಾಧಿಕಾರಿ ಸೂರ್ಯನು ಅತ್ಯಂತ ಶಕ್ತಿಶಾಲಿ, ಸೂರ್ಯನ ಬೆಳಕು ಅತ್ಯಂತ ದೊಡ್ಡ ಶಕ್ತಿಯ ಮೂಲವಾಗಿದೆ. ಕ್ಷೇತ್ರದ ಅನ್ನಛತ್ರಕ್ಕೆ ಸೌರಶಕ್ತಿಯ ಬೆಳಕು ನೀಡುವುದರಲ್ಲಿ ಸೆಲ್ಕೋ ಕಂಪನಿಯವರು ಸೋಲಾರ್ ಪ್ಯಾನೆಲ್ ಅಳವಡಿಸಿ ಸಹಕರಿಸಿದ್ದಾರೆ. ಅವರ ಸೇವೆಗೆ ನಾವು ಅಭಾರಿಯಾಗಿದ್ದೇವೆ ಎಂದರು.

ಸೆಲ್ಕೋ ಸಂಸ್ಥೆಯ ಸಿಇಓ ಮೋಹನ್ ಭಾಸ್ಕರ್ ಹೆಗ್ಡೆ ಮಾತನಾಡಿ ರಾಷ್ಟ್ರೀಯ ಬಹುಮುಖ್ಯವಾದ ಶ್ರದ್ದಾ ಕೇಂದ್ರ ಧರ್ಮಸ್ಥಳಕ್ಕೆ ದಿನನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಅನ್ನಪ್ರಸಾದ ಸ್ವೀಕಾರ ಮಾಡುತ್ತಾರೆ. ಜನರಿಗೆ ಇದರ ಪ್ರಯೋಜನವನ್ನು ತಿಳಿಯಪಡಿಸುವ ಸುದುದ್ದೇಶದಿಂದ ಇಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಸಿದ್ದೇವೆ ಎಂದರು.

ವೇದಿಕೆಯಲ್ಲಿ ಮಾತೃಶ್ರೀ ಹೇಮಾವತಿ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್,ಸುಪ್ರಿಯಾ ಹರ್ಷೆಂದ್ರ ಕುಮಾರ್ ಉಪಸ್ಥಿತರಿದ್ದರು. ಡಾ‌.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ ಹಾಗೂ ಶ್ರೀ ಕ್ಷೇತ್ರದ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು, ಸೆಲ್ಕೋ ಸಂಸ್ಥೆಯ ಬೆಳ್ತಂಗಡಿ ವ್ಯವಸ್ಥಾಪಕ ನವೀನ್ ವಂದಿಸಿದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya
error: Content is protected !!