September 6, 2026
ನಿಧನ

ಸಾಹಿತಿ ಪ್ರೊ ಎನ್ ಜಿ ಪಟವರ್ಧನ್ ವಿಧಿವಶ

ಉಜಿರೆ: ತಾಲೂಕಿನ ಹಿರಿಯ ಸಾಹಿತಿ ಪ್ರೋ| ಎನ್.ಜಿ ಪಟವರ್ಧನ್ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ೩೩ ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಎನ್.ಜಿ ಪಟವರ್ಧನ್ ಅವರು ಆನೇಕ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ತಾಲೂಕಿನ ಪ್ರಖ್ಯಾತ ಸಾಹಿತಿಗಳಲ್ಲಿ ಓರ್ವರಾಗಿದ್ದ ಅವರ ಆನೇಕ ಕವನ, ಹನಿಗವನ, ಕಥೆ, ಕಾದಂಬರಿ ಕೃತಿಗಳು ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷತೆಯನ್ನು ವಹಿಸಿ ಯಶಸ್ವಿಯಾಗಿ ನಿರ್ವಹಿಸಿದ್ದರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿರುವ ಎನ್.ಜಿ ಪಟವರ್ಧನ್ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

Related posts

ಕಾರ್ಯತಡ್ಕ ನಿವಾಸಿ ಜೋನ್ ವೆಲ್ಲಂಕಲ್ ನಿಧನ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಪಿಲಿಗೂಡು: ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya
error: Content is protected !!