September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

ಬೆಳ್ತಂಗಡಿ; ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ಬಂಧಿಸಿದ್ದಾರೆ.


ಬೆಳ್ಳಾರೆಯಲ್ಲಿ ಮನೆಗೆ ನುಗ್ಗಿ ಸುಮಾರು ರೂ 1,48,000 ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ 30,000/- ಸೇರಿ ಒಟ್ಟು ರೂ 1,78,000/- ಮೌಲ್ಯದ ಮನೆಕಳ್ಳತನ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಿದ ಪೊಲೀಸರು ಇದೀಗ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ಬಂಧಿಸಿ ಆತನಿಂದ ಕಳವು ಮಾಡಿದ ಸೊತ್ತು ಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿರುತ್ತದೆ.

ಪ್ರಕರಣದ ಪತ್ತೆಗಾಗಿ ಕಾರ್ಯದಲ್ಲಿ, ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್, ಐಪಿಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ಎಂ ಮತ್ತು ರಾಜೇಂದ್ರರವರುಗಳ ಮಾರ್ಗದರ್ಶನದಲ್ಲಿ, ವಿಜಯ ಪ್ರಸಾದ್, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪವಿಭಾಗ ರವರ ಮತ್ತು ಸುಳ್ಯ ವೃತ್ತ ನಿರೀಕ್ಷಕರಾದ ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ, ಸಂತೋಷ್ ಬಿ ಪಿ ಪೊಲೀಸ್ ಉಪನಿರೀಕ್ಷಕರು, ಬೆಳ್ಳಾರೆ ಪೊಲೀಸ್ ಠಾಣೆಯವರು ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂಧಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕರ್ತವ್ಯ ನಿರ್ವಹಿಸಿರುತ್ತಾರೆ. ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ವಿಶೇಷ ಬಹುಮಾನ ಘೋಷಿಸಿದ್ದಾರೆ.

Related posts

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!