April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆಯು ಜು.2 ರಂದು ಉಜಿರೆ ಸಂಜೀವಿನಿ ಸಭಾಂಗಣದಲ್ಲಿ ನಡೆಯಿತು.


ಸಭೆಯಲ್ಲಿ ದಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಇವರು ಆಗಮಿಸಿದ್ದರು. ಇವರಿಗೆ ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು ಹಾಗೂ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯೆ ವಿನುತ ರಜತ್ ಗೌಡ, ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯೆ ವನಿತಾ ಸಾಲ್ಯಾನ್ ಇವರನ್ನು ಗೌರವಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಪೂಜಾರಿ ವಹಿಸಿದ್ದು, ಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಗೀತಾ ಅತ್ತಾವರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಷಾರಿಕ ಪೂಜಾರಿ ಭಾಗವಹಿಸಿದ್ದರು.

ಗ್ರಾಮೀಣ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸುಮಂಗಲ ಸ್ವಾಗತಿಸಿ, ನಾಗವೇಣಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya
error: Content is protected !!