ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಮಡಂತ್ಯಾರು: ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಉದ್ಘಾಟನೆ ಕಾರ್ಯಕ್ರಮವು ಜು.1 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ|ಡಾ| ಸ್ಟ್ಯಾನಿ ಗೋವಿಯಸ್ ರವರು ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಕೋರಿ, ಸೇವೆ ಮಾಡಲು ಸಿದ್ಧ ನಿಂತವನೆ ನಾಯಕ, ನಾಯಕನಾದವನು ಸೇವೆ ಮಾಡಿ ಉಳಿದವರಿಗೆ ಮಾದರಿಯಾಗಬೇಕೆಂದು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆಯ ಮ್ಯಾನೇಜರ್ ಅಶೋಕ್ ಕೋಟ್ಯಾನ್ ಆಗಮಿಸಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ನಾಯಕನಾದನಿಗೆ ಶಿಸ್ತು, ಧೈರ್ಯ ಬಹಳ ಮುಖ್ಯ, ನಿಮ್ಮ ಯಶಸ್ಸಿಗೆ ಕಾರಣರಾದ ಗುರುಗಳನ್ನು ಯಾವತ್ತೂ ನೆನೆಪಿನಲ್ಲಿಟ್ಟುಕೊಳ್ಳಿ ಎಂದು ಹೇಳಿ, ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಶಾಲಾ ಮುಖ್ಯೋಪಾಧ್ಯಾಯವರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಇವತ್ತು ಒಂದು ಮಹತ್ವದ ದಿನ, ಕೆಟ್ಟ ವಿಷಯಗಳನ್ನು ಹೊರ ತೆಗೆದು ಒಳ್ಳೆಯ ವಿಷಯಗಳನ್ನು ಪಾಲಿಸಿ ಎಂದು ಹೇಳಿ ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಕೋರಿದರು.


ಕಾರ್ಯಕ್ರಮದಲ್ಲಿ ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಪಥ ಸಂಚಲನದ ಮೂಲಕ ವೇದಿಕೆಗೆ ಆಗಮಿಸಿ, ತಮ್ಮ ನಾಯಕತ್ವದ ಪದವಿಯನ್ನು ಗಣ್ಯ ವ್ಯಕ್ತಿಗಳಿಂದ ಪಡೆದು, ಪ್ರತಿಜ್ಞೆಯನ್ನು ಸ್ವೀಕರಿಸಿದರು. ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರು, ಮುಖ್ಯ ಅತಿಥಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಶುಭ ಕೋರಿದರು. ಕಾರ್ಯಕ್ರಮದಲ್ಲಿ ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್ ರವರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಹಶಿಕ್ಷಕ ಜೆರಾಲ್ಡ್ ಡಿಸೋಜ ಹಾಗೂ ಸಹಶಿಕ್ಷಕಿಯಾದ ಶ್ರೀಮತಿ ಐಡಾ ಡಿಕುನ್ಹರವರು ತರಬೇತಿಯನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಶ್ರೀಲಕ್ಷ್ಮೀ ಹಾಗೂ ನೀಲ್ ವಿವನ್ ರೊಡ್ರಿಗಸ್ ರವರು ನಿರೂಪಿಸಿ, ಲಾವಣ್ಯ ರವರು ಸ್ವಾಗತಿಸಿ, ರಿತೇಶ್ ಕ್ರಾಸ್ತಾ ರವರು ಧನ್ಯವಾದವನ್ನು ಸಮರ್ಪಿಸಿದರು.

Leave a Comment

error: Content is protected !!