25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

ಬೆಳ್ತಂಗಡಿ :ಮಳೆಗಾಲ ಪ್ರಾರಂಭವಾದ ನಂತರವಂತೂ ಸರಿಯಾದ ರೀತಿಯಲ್ಲಿ ಚರಂಡಿ ಸೇರಿದಂತೆ ಇನ್ನಿತರ ನಿಧಾನಗತಿ ಕಾಮಗಾರಿಯಿಂದ ರಸ್ತೆ ಸಂಚಾರ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಕಳೆದ ಕೆಲವು ದಿನಗಳ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆಸಿ ಸಾರ್ವಜನಿಕ ಸಂಚಾರಕ್ಕೆ ಹಾಗೂ ಶಾಲೆಯ ಬಳಿ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ತ್ವರಿತ ಗತಿಯ ಕಾಮಗಾರಿ ಮಾಡಬೇಕು ಎಂದು ಸೂಚಿಸಿದ್ದರು.ಅದರೆ ಗುತ್ತಿಗೆದಾರರ ನಿಧಾನಗತಿ ಕಾಮಗಾರಿಯಿಂದ ಶಾಲಾ ಮಕ್ಕಳಿಗೆ ಸೇರಿದಂತೆ ಜನ ಸಾಮಾನ್ಯರಿಗೆ ವಾಹನ ಸವಾರರಿಗೆ ಮತ್ತಷ್ಟು ತೊಂದರೆಯಾಗುತ್ತಿರುವ ಬಗ್ಗೆ ಮನಗಂಡು ರಾತ್ರೋರಾತ್ರಿ ಶಾಸಕ ಹರೀಶ್ ಪೂಂಜ ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರಲ್ಲದೇ ಗುತ್ತಿಗೆದಾರರ ನಿಧಾನಗತಿ ಕಾಮಗಾರಿ ಬಗ್ಗೆ ಅಸಾಮಾಧಾನ ಗೊಂಡ ಶಾಸಕರು ಒಂದು ವಾರದೊಳಗೆ ಚರಂಡಿ ಸೇರಿದಂತೆ ಪ್ರಮುಖವಾದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿ ಮುಗಿಸಬೇಕೆಂದು ಸೂಚಿಸಿದರು. ಕೆಲವೊಂದು ಕಡೆಗಳಲ್ಲಿ ಕೆಸರಿನಿಂದಾಗಿ ವಾಹನ ಸವಾರರಿಗೆ ತೊಂದರೆಯಾಗಿದೆ ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ಅಲ್ಲಲ್ಲಿ ಚರಂಡಿಯಲ್ಲಿ ನೀರು ನಿಂತಿರುವುದನ್ನು ಸರಿಪಡಿಸುವಂತೆ ಸೂಚಿಸಿದರು. ಭಾರೀ ಮಳೆಯ ನಡುವೆಯೂ ಶಾಸಕರು ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ತೆರಳಿ ಸಮಸ್ಯೆಗಳನ್ನು ಖುದ್ದು ವೀಕ್ಷಿಸಿ ತಕ್ಷಣ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಭೇಟಿ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಇಂಜಿನಿಯ‌ರ್ ಶಿವಪ್ರಸಾದ್ ಅಜಿಲ, ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya
error: Content is protected !!