24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಉಜಿರೆ ಇದರ ಮೊದಲನೇ ವರ್ಷಕ್ಕೆ ದಾಖಲಾಗಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಶೈಕ್ಷಣಿಕ ವಿಷಯಗಳ ಬಗ್ಗೆ ಮಾಹಿತಿ ನೀಡುವ ವಿಶೇಷ ಕಾರ್ಯಕ್ರಮ ಓರಿಯಂಟೇಷನ್ ಕಾರ್ಯಕ್ರಮ 2024 ಆಯೋಜನೆ ಮಾಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಕಾಲೇಜು ಮತ್ತು ಅವರ ಆಯ್ಕೆಯ ಕೋರ್ಸುಗಳ ಬಗ್ಗೆ ಸಮಗ್ರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಿವಿಲ್ ವಿಭಾಗ ಮುಖ್ಯಸ್ಥರಾದ ಶ್ರೀಮತಿ ತೃಪ್ತಿ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ತೆ ಶ್ರೀಮತಿ ಮೇರಿ ಸ್ಮಿತಾ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ದಿನೇಶ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಶ್ರೇಯಾಂಕ್ ಉಪಸ್ಥಿತರಿದ್ದರು.

ಕಾರ್ಯಕ್ರಮವು ಕಾಲೇಜಿನ ಪ್ರಾದ್ಯಾಪಕರುಗಳಾದ ಈಶ್ವರ್ , ಸಾಯಿ ಚರಣ್ ಇವರ ಪ್ರಾರ್ಥನೆಯೊಂದಿಗೆ ಆರಂಭಗೊಂಡು ಶಿವಪ್ರಸಾದ್ ಸ್ವಾಗತಿಸಿದರು. ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಈಶ್ವರ್ ಶರ್ಮಾ ವಂದಿಸಿದರು. ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರು ಕಾಲೇಜು ಸಿಬ್ಬಂದಿಗಳು ಸಾಕ್ಷಿಯಾದರು.

Related posts

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya
error: Content is protected !!