22.2 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆಯು ಜು.2 ರಂದು ಉಜಿರೆ ಸಂಜೀವಿನಿ ಸಭಾಂಗಣದಲ್ಲಿ ನಡೆಯಿತು.


ಸಭೆಯಲ್ಲಿ ದಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಇವರು ಆಗಮಿಸಿದ್ದರು. ಇವರಿಗೆ ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು ಹಾಗೂ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯೆ ವಿನುತ ರಜತ್ ಗೌಡ, ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯೆ ವನಿತಾ ಸಾಲ್ಯಾನ್ ಇವರನ್ನು ಗೌರವಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಪೂಜಾರಿ ವಹಿಸಿದ್ದು, ಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಗೀತಾ ಅತ್ತಾವರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಷಾರಿಕ ಪೂಜಾರಿ ಭಾಗವಹಿಸಿದ್ದರು.

ಗ್ರಾಮೀಣ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸುಮಂಗಲ ಸ್ವಾಗತಿಸಿ, ನಾಗವೇಣಿ ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!