ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

Updated on:

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ರೈತ ಮೋರ್ಚಾ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಜು.2 ರಂದು ಬೆಳ್ತಂಗಡಿ ಆಡಳಿತ ಸೌಧ ಬಳಿ ನಡೆಯಿತು.

ನಂತರ ರಾಜ್ಯ ಸರ್ಕಾರಕ್ಕೆ ಹಾಲಿನ ದರ ಏರಿಕೆಯನ್ನು ಹಿಂಪಡೆಯಲು ಹಾಗೂ ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಬಿಡುಗಡೆಗೆ ಗೊಳಿಸುವಂತೆ ಉಪತಹಶೀಲ್ದಾರ್ ರವಿಕುಮಾರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಜಿಲ್ಲಾ ನಾಯಕ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾದ ಜಯಂತ್ ಕೋಟ್ಯಾನ್, ರಾಕೇಶ್ ರೈ ಸುಳ್ಯ, ತಿಲಕ್ ಕುಮಾರ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವೂರು, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ್, ವಸಂತಿ ಮಚ್ಚಿನ, ಬೆಳ್ತಂಗಡಿ ಮಂಡಲ ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಅರ್ವರ್, ಪ್ರೇಮನಾಥ್ ಶೆಟ್ಟಿ, ಕಿಶೋರ್ ಕುಮಾರ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಯೋಗೀಶ್ ಗೌಡ ಆಳಂಬಿಲ ಕೊಕ್ಕಡ, ದಿವಿನೇಶ್ ಚಾರ್ಮಾಡಿ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ತುಳಸಿ ಮಾಲಾಡಿ ತಾಲೂಕು ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಹಿರಿಯರಾದ ಕುಶಾಲಪ್ಪ ಗೌಡ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣುರ್, ಜಿಲ್ಲಾ ಯುವ ಮೋರ್ಚಾ ಪ್ರದಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಹಾಗೂ ಸುಳ್ಯ, ಮೂಡಬಿದ್ರೆ, ಪುತ್ತೂರು ,ಬಂಟ್ವಾಳ, ಮಂಗಳೂರು ,ಮಂಗಳೂರು ಉತ್ತರ, ಮತ್ತು ದಕ್ಷಿಣ, ಬೆಳ್ತಂಗಡಿ ಮಂಡಲದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದರು.

ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವೂರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಸಂಯೋಜನೆ ಮಾಡಿದ ಕಾರ್ಯಕ್ರಮ ಕ್ಕೆ ರಾಧಾಕೃಷ್ಣ ಪ್ರಧಾನ ಕಾರ್ಯದರ್ಶಿ ಧನ್ಯವಾದವಿತ್ತರು.

Leave a Comment

error: Content is protected !!