24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ಕಾರ್ಯಕಾರ ನಡೆಯಿತು.

ಕಾರ್ಯಕ್ರಮದಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನೊಂದಿಗೆ ಜಂಟಿಯಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಹೆಡ್ ಕಾನ್ಸ್ಟೇಬಲ್ ಡಬ್ಲ್ಯೂ ಹೆಚ್ ಸಿ ಶ್ರೀಮತಿ ಸುನಿತಾ ಆಗಮಿಸಿ ಸೂಕ್ತ ಸಲಹೆ ಸೂಚನೆಗಳೊಂದಿಗೆ ಜಾಗೃತಿ ಮೂಡಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು .ಕುಮಾರಿ ದೀಪ್ತಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಸಹಶಿಕ್ಷಕಿ ಕಸ್ತೂರಿ, ಚೇತನ, ಮುರಳಿ ಪಿ, ಲೀನಾ ಪಿಂಟೋ ಸಹಕರಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.

Related posts

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!