ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ವೈದ್ಯ ವೃತ್ತಿ ಕೇವಲ ವೃತ್ತಿಯಲ್ಲ, ಅದು ಸೇವೆ. ರೋಗಿಗಳ ಸೇವೆಗಾಗಿ ತನ್ನ ಹೆಚ್ಚಿನ ಸಮಯವನ್ನು ಮುಡಿಪಾಗಿಡುವ ವೈದ್ಯರದ್ದು ಒತ್ತಡದ ಜೀವನ. ಮನರಂಜನೆ ಇಲ್ಲದೆ ಗ್ರಾಮೀಣ ಪ್ರದೇಶದ ಆಸ್ಪತ್ರೆಯಲ್ಲಿ ವೈದ್ಯಕೀಯ ವೃತ್ತಿ ಮಾಡುವ ನಮ್ಮಂತಹ ಆಸ್ಪತ್ರೆಯ ವೈದ್ಯರ ಸೇವೆ ನಿಜವಾಗಿಯೂ ಶ್ಲಾಘನೀಯ ಎಂದರು.


ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಅಮ್ಮನವರ ಆಶೀರ್ವಾದ ಮತ್ತು ಆದೇಶದಂತೆ, ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸೇವಾ ಮನೋಭಾವ ಮತ್ತು ವೃತ್ತಿ ನಿಷ್ಠೆಯಿಂದ ದುಡಿಯುತ್ತಿರುವ ನಮ್ಮ ಆಸ್ಪತ್ರೆಯ ವೈದ್ಯಕೀಯ ತಂಡ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಿದ್ದು, ಸ್ವತಃ ರೋಗಿಗಳೇ ವೈದ್ಯರ ಮತ್ತು ಆಸ್ಪತ್ರೆಯ ಸೇವೆಯನ್ನು ಶ್ಲಾಘಿಸುತ್ತಿದ್ದಾರೆ ಎಂದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಮಾತನಾಡಿ ಗ್ರಾಮೀಣ ಪ್ರದೇಶದ ಈ ಆಸ್ಪತ್ರೆಯಲ್ಲಿ ಸಾಮಾನ್ಯ ಜನರಿಗೆ ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಹಗಲಿರುಳು ದುಡಿಯುತ್ತಿರುವ ಎಲ್ಲಾ ವೈದ್ಯರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಹಾಗೂ ಸಂದರ್ಶನ ವೈದ್ಯರನ್ನು ಸನ್ಮಾನಿಸಲಾಯಿತು. ವಿವಿಧ ಮನರಂಜನಾ ಹಾಗೂ ಫನ್ನಿ ಗೇಮ್ಸ್‌ಗಳಲ್ಲಿ ಆಸ್ಪತ್ರೆಯ ವೈದ್ಯರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಖುಷಿಪಟ್ಟರು. ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಆಸ್ಪತ್ರೆಯ ವೈದ್ಯರು, ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಸೃಜನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!