30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ವೈದ್ಯ ವೃತ್ತಿ ಕೇವಲ ವೃತ್ತಿಯಲ್ಲ, ಅದು ಸೇವೆ. ರೋಗಿಗಳ ಸೇವೆಗಾಗಿ ತನ್ನ ಹೆಚ್ಚಿನ ಸಮಯವನ್ನು ಮುಡಿಪಾಗಿಡುವ ವೈದ್ಯರದ್ದು ಒತ್ತಡದ ಜೀವನ. ಮನರಂಜನೆ ಇಲ್ಲದೆ ಗ್ರಾಮೀಣ ಪ್ರದೇಶದ ಆಸ್ಪತ್ರೆಯಲ್ಲಿ ವೈದ್ಯಕೀಯ ವೃತ್ತಿ ಮಾಡುವ ನಮ್ಮಂತಹ ಆಸ್ಪತ್ರೆಯ ವೈದ್ಯರ ಸೇವೆ ನಿಜವಾಗಿಯೂ ಶ್ಲಾಘನೀಯ ಎಂದರು.


ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಅಮ್ಮನವರ ಆಶೀರ್ವಾದ ಮತ್ತು ಆದೇಶದಂತೆ, ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸೇವಾ ಮನೋಭಾವ ಮತ್ತು ವೃತ್ತಿ ನಿಷ್ಠೆಯಿಂದ ದುಡಿಯುತ್ತಿರುವ ನಮ್ಮ ಆಸ್ಪತ್ರೆಯ ವೈದ್ಯಕೀಯ ತಂಡ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಿದ್ದು, ಸ್ವತಃ ರೋಗಿಗಳೇ ವೈದ್ಯರ ಮತ್ತು ಆಸ್ಪತ್ರೆಯ ಸೇವೆಯನ್ನು ಶ್ಲಾಘಿಸುತ್ತಿದ್ದಾರೆ ಎಂದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಮಾತನಾಡಿ ಗ್ರಾಮೀಣ ಪ್ರದೇಶದ ಈ ಆಸ್ಪತ್ರೆಯಲ್ಲಿ ಸಾಮಾನ್ಯ ಜನರಿಗೆ ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಹಗಲಿರುಳು ದುಡಿಯುತ್ತಿರುವ ಎಲ್ಲಾ ವೈದ್ಯರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಹಾಗೂ ಸಂದರ್ಶನ ವೈದ್ಯರನ್ನು ಸನ್ಮಾನಿಸಲಾಯಿತು. ವಿವಿಧ ಮನರಂಜನಾ ಹಾಗೂ ಫನ್ನಿ ಗೇಮ್ಸ್‌ಗಳಲ್ಲಿ ಆಸ್ಪತ್ರೆಯ ವೈದ್ಯರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಖುಷಿಪಟ್ಟರು. ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಆಸ್ಪತ್ರೆಯ ವೈದ್ಯರು, ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಸೃಜನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya
error: Content is protected !!