24.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಈಕೆ ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

Related posts

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya
error: Content is protected !!