25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

ಪುದುವೆಟ್ಟು : ಶ್ರೀ.ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಜು 03 ರಂದು ಅಂದವಾದ ಆಂಗ್ಲ ಭಾಷಾ ಬರವಣಿಗೆಯ ಬಗ್ಗೆ ಕಾರ್ಯಾಗಾರ ನಡೆಯಿತು .

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾಂಚನ ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯರು ಲಕ್ಷ್ಮಿ ನಾರಾಯಣ ಹಾಗೂ ಆಂಗ್ಲ ಭಾಷಾ ಶಿಕ್ಷಕರಾದ ಉಜಿರೆಯ ಹರ್ಷಕುಮಾರ್ ಕೆ.ಎನ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಇಟಾಲಿಕ್ ಶೈಲಿಯಲ್ಲಿ ಇಂಗ್ಲಿಷ್ ಬರವಣಿಗೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅತ್ತ್ಯುತ್ತಮವಾದ ಪ್ರಾಯೋಗಿಕ ತರಬೇತಿಯನ್ನು ನೀಡಿದರು.

ಕಾರ್ಯಾಗಾರದ ಮಾರ್ಗದರ್ಶಕರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ಸುಜಾತ ಸ್ವಾಗತಿಸಿದರು . ಶಿಕ್ಷಕ ಪವನ್ ಕುಮಾರ್ ಧನ್ಯವಾದವಿತ್ತರು. ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜಾ ಹರ್ಷಕುಮಾರ್ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಾಗಾರದಲ್ಲಿ ಎಲ್ಲಾ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದು ಯಶಸ್ಸಿಗೆ ಸಹಕರಿಸಿದರು

Related posts

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

Suddi Udaya

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya
error: Content is protected !!