
ತೆಂಕಕಾರಂದೂರು: ನಿನ್ನೆಯಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ತೆಂಕಕಾರಂದೂರು ಜೀರ್ಣೋದ್ದಾರದ ಅವಧಿಯಲ್ಲಿ ರಚಿಸಲಾದ ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣದ ತಡೆಗೋಡೆ ಸಂಪೂರ್ಣವಾಗಿ ಕುಸಿದಿದ್ದು ಇನ್ನಷ್ಟು ಕುಸಿಯುವ ಹಂತದಲ್ಲಿದೆ. ಆದಷ್ಟು ಬೇಗ ಅಧಿಕಾರಿಗಳು ಬಂದು ಗಮನ ಹರಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಕೊಡಬೇಕಾಗಿ ಆಡಳಿತ ಮಂಡಳಿ ಹಾಗೂ ದೇವಸ್ಥಾನ ದ ಭಕ್ತಾದಿಗಳು ಆಗ್ರಹಿಸಿದ್ದಾರೆ.