38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಈಕೆ ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ