April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ ನಡೆಯಿತು. ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ. ಅವರು ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ‘ ಪ್ಲಾಸ್ಟಿಕ್ ಬಳಕೆ ಮಾಡಬಾರದು ಆದಷ್ಟು ಸಾಮಗ್ರಿ ಇತ್ಯಾದಿ ತರಲು ಬಟ್ಟೆಯಿಂದ ಮಾಡಿದ ಚೀಲ ಇತ್ಯಾದಿಗಳನ್ನು ಬಳಸಬೇಕು. ಪ್ಲಾಸ್ಟಿಕ್ ವಸ್ತುಗಳು ಭೂಮಿಯಲ್ಲಿ ಬಿದ್ದು ಕರಗದೆ ಅನೇಕ ಜೀವ ಸಂಕುಲಗಳಿಗೆ ಮಾರಕವಾಗುತ್ತಿದೆ ‘ ಎಂದು ಹೇಳಿದರು.

ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಆಶಯ ಭಾಷಣ ಮಾಡಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು. ಸ್ವಯಂ ಸೇವಕರಾದ ಸಾನ್ವಿ ಹಾಗೂ ಇಬ್ಬನಿ ಅವರು ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನದಲ್ಲಿ ಮಾತನಾಡಿದರು. ಸಾಕ್ಷಿ ನಿರೂಪಿಸಿ , ವಂದಿಸಿದರು.

ಈ ಸಂದರ್ಭದಲ್ಲಿ ಉಜಿರೆ ಪರಿಸರದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಯಂ ಸೇವಕರು ನಾಯಕರಾದ ಆದಿತ್ಯ ಹಾಗೂ ಪ್ರಾಪ್ತಿಯವರ ನೇತೃತ್ವದಲ್ಲಿ ಸ್ವಚ್ಛಗೊಳಿಸಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನದಲ್ಲಿ ಭಾಗವಹಿಸಿದರು.

Related posts

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya
error: Content is protected !!