September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು (ಜು.6 ರಂದು) ನಾಳೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದು, ಇಸ್ರೋ ಬೆಂಗಳೂರು ಇದರ ಹಿರಿಯ ವಿಜ್ಞಾನಿ ಪಿ.ವಾಸುದೇವ ರಾವ್ ಭಾಗವಹಿಸಲಿದ್ದಾರೆ. ಸುಧಾ ವಾರಪತ್ರಿಕೆಯ ಮುಖ್ಯ ಉಪ ಸಂಪಾದಕಿ ಉಮಾ ಅನಂತ್ ಉಪನ್ಯಾಸ ನೀಡಲಿದ್ದು, ವಿಧಾನ ಪರಿಷತ್‌ ಶಾಸಕ ಪ್ರತಾಪ ಸಿಂಹ ನಾಯಕ್, ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅಥಿತಿಗಳಾಗಿ ಭಾಗವಹಿಸಲಿದ್ದಾರೆ.

ಸಂಘದ ಅಧ್ಯಕ್ಷ ಚೈತೇಶ್‌ ಇಳಂತಿಲ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಪೈಕಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕ ಪಡೆದ ಕಲ್ಮಂಜ ಸರ್ಕಾರಿ ಪ್ರೌಢ ಶಾಲೆಯ ತನುಶ್ರೀ, ಕಾಯರ್ತಡ್ಕ ಸರ್ಕಾರಿ ಪ್ರೌಢ ಶಾಲೆಯ ಮೇಘನಾ ಹಾಗೂ ಮಚ್ಚಿನ ಸರ್ಕಾರಿ ಪ್ರೌಢ ಶಾಲೆಯ ಮಹಮ್ಮದ್ ಜಿಯಾದ್ ಇವರಿಗೆ ಗೌರವಾರ್ಪಣೆ, ಪತ್ರಕರ್ತ ಮನೋಹರ್ ಬಳಂಜ ಹಾಗೂ ಲಿಖಿತ ದಂಪತಿ ವತಿಯಿಂದ ಅನಾರೋಗ್ಯಪೀಡಿತ ಮಕ್ಕಳ ಚಿಕಿತ್ಸೆಗಾಗಿ ಅರ್ಹ 6 ಮಂದಿಗೆ ದಿತಿ ಸಾಂತ್ವನ ನಿಧಿ ವಿತರಣೆ ನಡೆಯಲಿದೆ.

Related posts

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya
error: Content is protected !!