ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

Updated on:

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಜು.5ರಂದು ವಜಾಗೊಳಿಸಿದೆ. ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ.5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಬೆಳ್ತ೦ಗಡಿ ಶಾಸಕ ಹರೀಶ್‌ ಪೂಂಜ ಹಾಗೂ ಬೆಂಬಲಿಗರ ಮೇಲೆ ವಿವಿಧ ಸ೦ದರ್ಭದಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳ ಆರೋಪಿತರಿಗೆ ವಿಚಾರಣಾ ನ್ಯಾಯಾಲಯಕ್ಕೆ ಖದ್ದು ಹಾಜರಾತಿಯಿ೦ದ ವಿನಾಯಿತಿ ನೀಡಿ ಹೈಕೋರ್ಟ್‌ ಆದೇಶ ಮಾಡಿದೆ. ನ್ಯಾಯವಾದಿ ಶುಶಾಲ್ ತಿವಾರಿ ಮೂಲಕ ಆರೋಪಿತರು ಸಲ್ಲಿಸಿದ್ದ ಅರ್ಜಿಗೆ ನ್ಯಾಯವಾದಿ ಪ್ರಸನ್ನ ದೇಶಪಾ೦ಡೆ ಹಾಗೂ ಹಿರಿಯ ನ್ಯಾಯವಾದಿ ಪ್ರಭುಲಿಂಗ ನಾವದಗಿ ವಾದವನ್ನು ಆಲಿಸಿದ ನ್ಯಾಯಮೂರ್ತಿ ಶ್ರೀಕೃಷ್ಣದೀಕ್ಷಿತರ ಏಕ ಸದಸ್ಯ ಪೀಠ ಆದೇಶಿಸಿದೆ.

Leave a Comment

error: Content is protected !!