September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಜು.5ರಂದು ವಜಾಗೊಳಿಸಿದೆ. ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ.5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಬೆಳ್ತ೦ಗಡಿ ಶಾಸಕ ಹರೀಶ್‌ ಪೂಂಜ ಹಾಗೂ ಬೆಂಬಲಿಗರ ಮೇಲೆ ವಿವಿಧ ಸ೦ದರ್ಭದಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳ ಆರೋಪಿತರಿಗೆ ವಿಚಾರಣಾ ನ್ಯಾಯಾಲಯಕ್ಕೆ ಖದ್ದು ಹಾಜರಾತಿಯಿ೦ದ ವಿನಾಯಿತಿ ನೀಡಿ ಹೈಕೋರ್ಟ್‌ ಆದೇಶ ಮಾಡಿದೆ. ನ್ಯಾಯವಾದಿ ಶುಶಾಲ್ ತಿವಾರಿ ಮೂಲಕ ಆರೋಪಿತರು ಸಲ್ಲಿಸಿದ್ದ ಅರ್ಜಿಗೆ ನ್ಯಾಯವಾದಿ ಪ್ರಸನ್ನ ದೇಶಪಾ೦ಡೆ ಹಾಗೂ ಹಿರಿಯ ನ್ಯಾಯವಾದಿ ಪ್ರಭುಲಿಂಗ ನಾವದಗಿ ವಾದವನ್ನು ಆಲಿಸಿದ ನ್ಯಾಯಮೂರ್ತಿ ಶ್ರೀಕೃಷ್ಣದೀಕ್ಷಿತರ ಏಕ ಸದಸ್ಯ ಪೀಠ ಆದೇಶಿಸಿದೆ.

Related posts

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಮೇ 21: ವಿದ್ಯುತ್ ನಿಲುಗಡೆ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya
error: Content is protected !!