April 2, 2025
Uncategorizedಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

ಬೆಳ್ತಂಗಡಿ: ಪರವಾನಿಗೆ ಪಡೆಯದೆ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಹಾಗೂ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಪೊಲೀಸರನ್ನು ನಿಂದಿಸಿದ ಆರೋಪಗಳನ್ನು ಕೈ ಬಿಡುವಂತೆ ವಿಚಾರಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಕಾನೂನು ಪರಿಹಾರ ಪಡೆದುಕೊಳ್ಳುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಹೈಕೋರ್ಟ್ ಸೂಚಿಸಿದೆ.

ಬೆಳ್ತಂಗಡಿ ಠಾಣಾ ಪೊಲೀಸರ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ ವಿರುದ್ಧ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡುಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಶುಕ್ರವಾರ ಈ ನಿರ್ದೇಶನನೀಡಿ, ಅರ್ಜಿಗಳನ್ನು ಇತ್ಯರ್ಥಪಡಿಸಿತು. ಪ್ರಕರಣ ಸಂಬಂಧ ಶಾಸಕ ಪೂಂಜ ವಿರುದ್ಧ ಈಗಾಗಲೇ ಪೊಲೀಸರು ವಿಚಾರಣ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿರುವ ಅಂಶವನ್ನು ಪರಿಗಣಿಸಿದ ನ್ಯಾಯಪೀಠ ಈ ಆದೇಶ ಮಾಡಿದೆ, ದೋಷಾರೋಪ ಪಟ್ಟಿ ಸಲ್ಲಿಸಿರುವುದರಿಂದ ಆರೋಪಗಳನ್ನು ಕೈ ಬಿಡಲು ಕೋರಿ ವಿಚಾರಣ ನ್ಯಾಯಾಲಯಕ್ಕೆ ಅರ್ಜಿದಾರರು ಅರ್ಜಿ ಸಲ್ಲಿಸಲಿ. ನ್ಯಾಯಾಲಯವು ಎಂಟು ವಾರಗಳಲ್ಲಿ ಆ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯವರೆಗೆವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಬಾರದು ಎಂದು ಸೂಚಿಸಿದ ನ್ಯಾಯಪೀಠ ಅರ್ಜಿಗಳನ್ನು ಇತ್ಯರ್ಥಪಡಿಸಿತು.

ಪ್ರಕರಣ: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಶಶಿರಾಜ್ ಶೆಟ್ಟಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಇದರಿಂದ ಸಿಟ್ಟಾಗಿದ್ದ ಅರ್ಜಿದಾರರು ಠಾಣೆಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಾಚ್ಯವಾಗಿ ಬೈದು ಬೆದರಿಕೆ ಒಡ್ಡಿದ್ದರು. ಜತೆಗೆ, ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ಸಹ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಎರಡು ಎಫ್‌ಐಆ‌ರ್ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಹರೀಶ್ ಪೂಂಜ ಹೈಕೋರ್ಟ್ ಮೆಟ್ಟಿಲೆರಿದ್ದರು. ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಅಧೀನ ನ್ಯಾಯಾಲಯಕ್ಕೆ ಪೊಲೀಸರು ಹರೀಶ್ ಪೂಂಜ ಹಾಗೂ ಇತರ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Related posts

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya
error: Content is protected !!