ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧಿಸುವಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.
2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನೆಚ್ಚರಿಗೆ ವಹಿಸಬೇಕಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಸಾರ್ವಜನಿಕರು/ಪ್ರವಾಸಿಗರು ಜಿಲ್ಲೆಯ ವಿವಿಧ ಜಲಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ನೀರಿನಲ್ಲಿ ಇಳಿಯುವುದು, ಮೀನು ಹಿಡಿಯುವುದು, ಈಜುವುದು, ಮೋಜು-ಮಸ್ತಿ ಇತ್ಯಾದಿ ಚಟುವಟಿಕೆಗಳನ್ನು ನಡೆಸುತ್ತಿರುವುದರಿಂದ ನೀರಿನಲ್ಲಿ ಮುಳುಗಿ ದುರ್ಮರಣ ಹೊಂದಿರುವಂತಹ ಪ್ರಕರಣಗಳು ಗಮನಕ್ಕೆ ಬಂದಿರುತ್ತದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧಿಸಲಾಗಿದೆ.