38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನರಾದ ಸುದ್ದಿ ತಿಳಿದು ದುಃಖವಾಯಿತು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.


ಆತ ನಾನು ಮೆಚ್ಚಿದ ಶ್ರೇಷ್ಠ ಕಲಾವಿದರಾಗಿದ್ದು, ಕೇರಳ ಮೂಲದವರಾದರೂ, ಸ್ಪಷ್ಟ ಉಚ್ಛಾರ, ಭಾಷಾಶುದ್ಧಿ ಹಾಗೂ ಪಾತ್ರಗಳಿಗೆ ಜೀವತುಂಬುವ ಕಲೆ ಅವರಲ್ಲಿ ಅದ್ಭುತವಾಗಿತ್ತು. ನೃತ್ಯ, ಅಭಿನಯ ಮತ್ತು ಉತ್ತಮ ವಾಕ್ಪಟುತ್ವದೊಂದಿಗೆ ಅವರು ಕಲಾಭಿಮಾನಿಗಳ ಮುಕ್ತ ಪ್ರಶಂಸೆಗೆ ಪಾತ್ರರಾಗಿದ್ದರು.
ಅವರ ನಿಧನದಿಂದ ಶ್ರೇಷ್ಠ ಯಕ್ಷಗಾನ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ.
ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು, ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದರು.

Related posts

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya
error: Content is protected !!