ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರಸಕ್ತ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಜುಲೈ 5 ರಂದು ನಡೆಯಿತು.


ಉದ್ಘಾಟನೆಯನ್ನು ನೆರವೇರಿಸಿದ ಶ್ರೀ.ಧ.ಮ.ಕಾಲೇಜಿನ ಪ್ರಾಧ್ಯಾಪಕರಾದ ಗಣೇಶ ವಿ ಶೆಂಡ್ಯೆಯವರು ಮಾತನಾಡಿ, ‘ಎನ್ ಎಸ್ ಎಸ್ ಸ್ವಯಂಸೇವಕರು ತಾವು ಮಾಡುವ ಪ್ರತಿಯೊಂದು ಕೆಲಸವನ್ನು ಮನಸ್ಸಿನಿಂದ ಮಾಡಬೇಕು. ಪರಿಸರ ಪ್ರಜ್ಞೆ ಬೆಳೆಸಿಕೊಂಡು, ಪ್ರಚಲಿತ ವಿದ್ಯಮಾನಗಳ ಬಗ್ಗೆ ಜಾಗೃತಿ ಹೊಂದಿರಬೇಕು ‘ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ವಿನಯಚಂದ್ರ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಕಾರ್ಯಕ್ರಮಾಧಿಕಾರಿ ಶ್ರೀ ಸಂದೀಪ್ ಐ ಉಪಸ್ಥಿತರಿದ್ದರು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಸ್ವಾಗತಿಸಿದರು. ಸ್ವಯಂಸೇವಕ ಲತೇಶ್ ನಿರೂಪಿಸಿ, ಸ್ವಯಂಸೇವಕಿ ಕುಮಾರಿ ಛಾಯಾ ಧನ್ಯವಾದವಿತ್ತರು.

Leave a Comment

error: Content is protected !!