32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುನಂದ ರವರ ಅಧ್ಯಕ್ಷತೆಯಲ್ಲಿ ಜು.8 ರಂದು ನಾವೂರು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಹಾಯಕ ನಿರ್ದೇಶಕರು ತಾರಾಕೇಸರಿ ನಡೆಸಿದರು.

ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಮಮತಾ, ಗ್ರಾ.ಪಂ. ಸದಸ್ಯರು, ವಿವಿಧ ಇಲಾಖಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಸರಕಾರದ ವಿವಿಧ ಯೋಜನೆಗಳ ಬಗ್ಗೆ ಗ್ರಾಮಸ್ಥರಿಂದ ಅರ್ಜಿಯನ್ನು ಸ್ವೀಕರಿಸಲಾಯಿತು. ಹಾಗೂ ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.

ಶಾಲಾ ಮಕ್ಕಳು ನಾಡಗೀತೆ ಹೇಳಿದರು. ಸಿಬಂದಿಗಳು ಜಮಾ -ಖರ್ಚು ಹಾಗೂ ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆಗಳನ್ನು ಓದಿದರು. ಕಾರ್ಯಕ್ರಮವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ ನಿರೂಪಿಸಿ, ಅನುಪಾಲನಾ ವರದಿ ವಾಚಿಸಿದರು. .

Related posts

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!