24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

ದಕ್ಷಿಣ ಕನ್ನಡ ಜಿಲ್ಲಾ ಬಸದಿ ಸ್ವಚ್ಛತಾ ತಂಡ ಬಸದಿಯ ಸ್ವಚ್ಛತೆಯ ಜೊತೆಗೆ ಸಮಾಜಮುಖಿ ಕೆಲಸಕಾರ್ಯಗಳತ್ತ ಹೆಜ್ಜೆ ಇಟ್ಟಿತ್ತು . ಇದೀಗ ಪರಿಸರ ಸಂರಕ್ಷಣೆಯ ಕೆಲಸದತ್ತ ದಿಟ್ಟ ಹೆಜ್ಜೆ ಇಟ್ಟಿದೆ.

ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವೃತ್ತ, ಮಂಗಳೂರು ವಿಭಾಗ ಮತ್ತು ಬಂಟ್ವಾಳ ವಲಯದ ಸಹಯೋಗದಲ್ಲಿ ಬಸದಿ ಸ್ವಚ್ಛತಾ ತಂಡವು ಕಾರಿಂಜದ ಕುಂಟರ ಪಲ್ಕೆ ಕೊಡ್ಯಾ ಮಲೆ ಎಂಬಲ್ಲಿ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ ಹಾಗೂ ಹಸಿರಿಗಾಗಿ ಮಾವು, ಹಲಸು, ಪೇರಳೆ, ಪುನರ್ಪುಳಿ, ಹುಣಸೆ ಹುಳಿ, ಕೊಕ್ಕೋ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಸಿದರು. ಊರ ಪರಿಸರ ಪ್ರೇಮಿಗಳು ಕೈ ಜೋಡಿಸಿದರು.

ಇದೀಗ ಬಸದಿ ಸ್ವಚ್ಛತಾ ತಂಡದವರ ಮರ ಗಿಡಗಳನ್ನು ಬೆಳಿಸಿ ಪ್ರಾಣಿ ಪಕ್ಷಿ ಸಂಕುಲ ಉಳಿಸಿ, ಪ್ರಕೃತಿಯನ್ನು ಪ್ರೀತಿಸಿ ಎಂಬ ಧ್ಯೇಯದ ಪ್ರಾಮಾಣಿಕ ಕಾರ್ಯಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

‘ಅನ್ವೇಷಣೆ–2026’ ಸ್ಪರ್ಧೆ; ಎಸ್‌ಡಿಎಂ ಶಾಲೆಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya
error: Content is protected !!