28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ 2024-25ರ ವರ್ಷದ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭವು ಜು.೫ರಂದು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ರವರ ಘನ ಅಧ್ಯಕ್ಷತೆಯಲ್ಲಿ ನೆರವೇರಿತು.

ಮುಖ್ಯ ಅತಿಥಿಗಳಾಗಿ ವಕೀಲರು ಮತ್ತು ಶಾಲಾ ಪೋಷಕರಾದ ಪ್ರಶಾಂತ್ ಎಂ. ದೀಪವನ್ನು ಬೆಳಗಿಸಿ ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಪ್ರಜಾಪ್ರಭುತ್ವ ವ್ಯವಸ್ಥೆಯ ಅರಿವನ್ನು ನೀಡುವುದರಿಂದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಲು ಸಹಕಾರಿಯಾಗಬಲ್ಲದು, ಶಿಸ್ತು, ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿ ವಿದ್ಯಾರ್ಥಿ ಜೀವನದಲ್ಲಿ ಸಾಗುವಂತಾಗಬೇಕು ಎಂದು ಹಿತವಚನ ನೀಡಿದರು.

ಅತಿಥಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಿವರಾಮ ಹೆಗ್ಡೆ ಭಾಗವಹಿಸಿದ್ದರು.

ಸಮಾರಂಭದಲ್ಲಿ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ರವರು ಪ್ರಮಾಣ ವಚನ ಭೋದಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಕಲ್ಪನೆ ಹಾಗೂ ಎಳವೆಯಲ್ಲಿ ನಾಯಕತ್ವ ಗುಣಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಲು ನೂತನ ಮಂತ್ರಿಮಂಡಲದ ವ್ಯವಸ್ಥೆಯು ಸಹಕಾರಿಯಾಗುತ್ತದೆ ವಿದ್ಯಾರ್ಥಿಗಳು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತಾಗಬೇಕೆಂದು ಆಶಯವನ್ನು ವ್ಯಕ್ತಪಡಿಸಿದರು.

ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ ಎ., ಮಂತ್ರಿಮಂಡಲದ ರಚನೆಯ ನಿರ್ವಹಣೆ ಮಾಡಿದ ಶಿಕ್ಷಕಿಯರಾದ ಶ್ರೀಮತಿ ಮಮತಾ ಮತ್ತು ಶ್ರೀಮತಿ ರಮ್ಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಸಮಾರಂಭ ಪ್ರಾರಂಭಗೊಂಡಿತು. ವಿಧ್ಯಾರ್ಥಿಗಳಾದ ಮಾ. ಅಬ್ದಲ್ ಶಾಹಿದ್ ಸ್ವಾಗತಿಸಿ, ಮಾ. ಮನೀಶ್ ಮೋಹನ್ ವಂದಿಸಿದರು. ಕು. ತೃಷ ಮತ್ತು ಸಾನ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya
error: Content is protected !!