ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

ಬೆದ್ರಬೆಟ್ಟು: ಸುಮಾರು 800 ವರ್ಷಗಳ ಇತಿಹಾಸವಿರುವ ರಾಜಮನೆತನದ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ಕ್ಷೇತ್ರ ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ ಕಾರ್ಯಕ್ರಮವು ಕ್ಷೇತ್ರದಲ್ಲಿ ಜು.7 ರಂದು ನಡೆಯಿತು.

ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ವಿಜ್ಞಾಪನಾ ಪತ್ರವನ್ನು ಕರ್ನಾಟಕ ರಾಜ್ಯ ಮಾಜಿ ಸಚಿವ ಗಂಗಾಧರ ಗೌಡ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಮೋದ್ ಕುಮಾರ್ ವಹಿಸಿದ್ದರು. ಚಂದ್ರಶೇಖರ್ ಸ್ವಸ್ತಿಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಮುಕುಂದ ಸುವರ್ಣ, ಬಂಗಾಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಎಲ್ ಲಕ್ಷ್ಮಣ ಗೌಡ, ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಕೊಲ್ಲಿ ದೇವಸ್ಥಾನದ ಕಾರ್ಯದರ್ಶಿ ದಾಸಪ್ಪ ಗೌಡ, ಊರಿನ ಹಿರಿಯರಾದ ಸುಂದರ ಗೌಡ, ಶೀನಪ್ಪ ಗೌಡ, ನೇತ್ರಾ ಕೊಡಂಗೆ, ಉದ್ಯಮಿ ಶ್ರೀಧರ್ ಗುಡಿಗಾ‌ರ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರಕ್ಷಿತಾ ಪ್ರಾರ್ಥಿಸಿ, ಚಂದ್ರಶೇಖರ್ ಗೌಡ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Related posts

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya

ತೀರಾ ಹದಗೆಟ್ಟ ಮಚ್ಚಿನ ಪುರುಷರ ಮಜಲು ಕಲಾಯಿ ರಸ್ತೆ : ಶಾಲಾ ಮಕ್ಕಳ ಪರದಾಟ; ದುರಸ್ತಿಗೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya
error: Content is protected !!