ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಲಾಯಿಲ ಮತ್ತು ಬೆಳ್ತಂಗಡಿ ವಲಯದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ಶ್ರೀ ಮಂಜುನಾಥ ಕಲ್ಯಾಣ ಮಂಟಪ ಬೆಳ್ತಂಗಡಿಯಲ್ಲಿ ಉಜಿರೆ ಶ್ರೀ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇ ಗೌಡ ರವರು ನೆರವೇರಿಸಿ ನಾವು ಆರೋಗ್ಯವಾಗಿದ್ದರೆ ನಮ್ಮ ಜೀವನ ಸಾರ್ಥಕ, ಆಗ ನಾವು ಏನನ್ನು ಬೇಕಾದರೂ ಸಾಧಿಸಬಹುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಿದರು. ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್ ರವರು ಯಾವುದೇ ಕಾಯಿಲೆ ಮೊದಲೇ ಗೊತ್ತಾದರೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆದು ಕಡಿಮೆ ಖರ್ಚಿನಲ್ಲಿ ಬೇಗ ಗುಣಪಡಿಸಲು ಸಾಧ್ಯ ಪೂಜ್ಯರ ಆಶಯದಂತೆ ಜನರಿಗೆ ಸರಿಯಾದ ಮಾಹಿತಿ ನೀಡುವ ಉದ್ದೇಶದಿಂದ ಆಸ್ಪತ್ರೆಯ ಮೂಲಕ ಉಚಿತ ವೈದ್ಯಕೀಯ ಸೇವೆಯನ್ನು ಸಲ್ಲಿಸುವ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಂಡಿದ್ದು ನಡೆಸಲಾಗುವ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಲಾಯಿಲ ವಲಯದ ಒಕ್ಕೂಟದ ವಲಯಾಧ್ಯಕ್ಷರಾದ ಬಿ ಎ ರಜಾಕ್, ಬೆಳ್ತಂಗಡಿ ಒಕ್ಕೂಟದ ಅಧ್ಯಕ್ಷ ಶ್ರೀಕೇಶ್ ಕೋಟ್ಯಾನ್ ರವರು ಯೋಜನಾಧಿಕಾರಿ ಸುರೇಂದ್ರ, ಫಿಜಿಸಿಯನ್ ಡಾ| ಅಶ್ವಿತ್, ಕಣ್ಣಿನ ತಜ್ಞರಾದ ಡಾ| ಸುಭಾಷ್, ಇಎನ್ ಟಿ ತಜ್ಞರಾದ ಡಾ| ರೋಹನ್ ದೀಕ್ಷಿತ್, ಮೂಲೆ ಎಲುಬು ತಜ್ಞರಾದ ಪ್ರತಿಕ್ಷ್, ಚರ್ಮಾರೋಗ ತಜ್ಞರಾದ ಪ್ರವಿಶ್ ಆರ್.ಕೆ ಯವರು ಉಪಸ್ಥಿತರಿದ್ದರು.
ಕೃಷಿ ಮೇಲ್ವಿಚಾರಕರಾದ ರಾಮ್ ಕುಮಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್ ಸ್ವಾಗತಿಸಿ, ಉಜಿರೆ ವಲಯ ಮೇಲ್ವಿಚಾರಕರಾದ ವನಿತಾರವರು ಧನ್ಯವಾದವಿತ್ತರು.